December 19, 2025

ಮಂಗಳೂರು: ಬ್ಲ್ಯಾಕ್ಮೇಲ್ ಮಾಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

0
image_editor_output_image1856802117-1752579421754.jpg

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ. ಬಳಿಕ ವಾಟ್ಸಾಪ್ ನಲ್ಲಿ ಚಾಟ್ ಮಾಡುತ್ತಿದ್ದ, ವಿದ್ಯಾರ್ಥಿನಿ ನಂಬಿ ಆಗಾಗ ಉಪನ್ಯಾಸಕನಿಂದ ನೋಟ್ಸ್ ಪಡೆಯುತ್ತಿದ್ದ. ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.

ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಮಯದಲ್ಲಿ ಆಕೆ ಪ್ರತಿರೋಧ ವ್ಯಕ್ತಪಡಿಸಿದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ನನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ ಎಂದು ಬ್ಲ್ಯಾಕ್ಮೇಲ್ ಮಾಡಿ ಅತ್ಯಾಚಾರ ನಡೆಸಿದ್ದ.

ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಲಾಗುತ್ತಿದೆ.

ಉಪನ್ಯಾಸಕರಿಂದ ಬೆದರಿಕೆ ಹೆಚ್ಚಾದಾಗ ಸಂಕಷ್ಟ ತಾಳಲಾರದೆ ಪೊಷಕರು ಮಗಳನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಕೌನ್ಸೆಲಿಂಗ್ ನೀಡಿ ಧೈರ್ಯ ತುಂಬಿದ್ದಾರೆ, ಬಳಿಕ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!