March 13, 2026

ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ: ಮೂವರು ಶಾಲಾ ವಿದ್ಯಾರ್ಥಿಗಳು ಸಾವು

0
image_editor_output_image315527396-1752646121448.jpg

ಆನೇಕಲ್: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಮೂವರು ಶಾಲಾ ವಿಧ್ಯಾರ್ಥಿಗಳು ದುರಂತ ಅಂತ್ಯ ಕಂಡಿದ್ದಾರೆ. ತಮಿಳುನಾಡು ಹೊಸೂರಿನ ಮತ್ತಿಗೆರೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.

ಮದನ್ ಕುಮಾರ್, ಹರೀಶ್ ಕುಮಾರ್, ಅರಿಯನ್ ಸಿಂಗ್ ಮೃತ ವಿದ್ಯಾರ್ಥಿಗಳು. ವಿದ್ಯಾರ್ಥಿಗಳು ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದರು. ಶಾಲೆ ಬಿಟ್ಟ ಬಳಿಕ ಮೂವರು ಸ್ನೇಹಿತರು ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಮಾಡಿದ್ದರು.

ಈ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಸದ್ಯ ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೃಷ್ಣಗಿರಿ ಜಿಲ್ಲಾ ಎಸ್ಪಿ ರಾಣತುರೈ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

error: Content is protected !!