ಮಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು: ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಬಂಧನ
ಮಂಗಳೂರ: ಪೊಲೀಸ್ ಕಾನ್ಸ್ಸ್ಟೇಬಲ್ ಮಹಿಳೆಯೊಬ್ಬರ ಪತಿಯ ಸಹಕಾರದಲ್ಲಿ ಆಕೆಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಬಗ್ಗೆ ಪ್ರಕರಣ ದಾಖಲಾಗಿದೆ.
ದಿನಾಂಕ: 15-07-2025 ರಂದು ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಸಂತ್ರಸ್ಥ ಮಹಿಳೆಯೊರ್ವರು ಠಾಣೆಗೆ ಹಾಜರಾಗಿ ಲಿಖಿತ ದೂರನ್ನು ನೀಡಿದ್ದಾರೆ. ತನ್ನ ಗಂಡನು ಹಣಕ್ಕಾಗಿ ಒತ್ತಾಯಪೂರ್ವಕವಾಗಿ ಬೇರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಮಾಡಿ, ಅದರ ವಿಡಿಯೋವನ್ನು ಚಿತ್ರೀಕರಣ ಮಾಡಿ, ಇತರರೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಡುವುದಾಗಿ ಬೆದರಿಸಿರುವುದಾಗಿದೆ.
ಸಂತ್ರಸ್ಥ ಮಹಿಳೆಯು ತನಗೆ ಪರಿಚಯವಿರುವ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ನಿಗೆ ಈ ಬಗ್ಗೆ ತಿಳಿಸಿದಾಗ, ಚಂದ್ರನಾಯ್ಕ್ ನು ಸಂತ್ರಸ್ಥೆಯ ಮನೆಗೆ ಹೋಗಿ ಗಂಡನ ಮೊಬೈಲ್‌ನಲ್ಲಿದ್ದ ಪೋಟೋ ಮತ್ತು ವಿಡಿಯೋವನ್ನು ಅಳಿಸಿರುತ್ತಾನೆ. ನಂತರ ಸಂತ್ರಸ್ಥೆಯ ಗಂಡನ ದುಷ್ಪ್ರೇರಣೆಯಂತೆ ಚಂದ್ರನಾಯ್ಕ್ ನು ಸಂತ್ರಸ್ಥ ಮಹಿಳೆಯೊಂದಿಗೆ ಒತ್ತಾಯ ಪೂರ್ವಕವಾಗಿ ಅವಳ ಇಚ್ಚೆಯ ವಿರುದ್ದ ದೈಹಿಕ ಸಂಪರ್ಕ ನಡೆಸಿರುತ್ತಾನೆ. ಸಂತ್ರಸ್ಥೆಯ ದೂರಿನ ಹಿನ್ನಲೆಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ಥ ಮಹಿಳೆಯ ಗಂಡ ಮತ್ತು ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಚಂದ್ರನಾಯ್ಕ್ ನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.




