ಜುಲೈ 17: ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲಾ, ಪದವಿಪೂರ್ವ ಕಾಲೇಜ್ ಗಳಿಗೆ ರಜೆ ಘೋಷಣೆ: ದ.ಕ ಜಿಲ್ಲಾಧಿಕಾರಿ ಆದೇಶ
ಮಂಗಳೂರು: ಕರಾವಳಿ ಭಾಗದ ಜಿಲ್ಲೆಗಳಲ್ಲಿ ವರುಣನ ಅರ್ಭಟ ಮುಂದುವರೆದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.17 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮ:
1. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
2. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
3. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
4. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
5. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.




