December 18, 2025

ಬೈಕ್‌ಗೆ ಢಿಕ್ಕಿ ಹೊಡೆದು ಕಾಲುವೆಗೆ ಪಲ್ಟಿಯಾದ ಕಾರು: ಇಬ್ಬರು ಮಕ್ಕಳು ಸೇರಿ 7 ಮಂದಿ ಸಾವು

0
image_editor_output_image2090799909-1752736505065.jpg

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು, ಮೂವರು ಪುರುಷರು ಹಾಗೂ ಎರಡು ವರ್ಷದ ಮಗು ಸೇರಿದಂತೆ 7 ಜನ ಸಾವನ್ನಪ್ಪಿದ್ದಾರೆ.

ಕಾರು ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದೆ. ಬಳಿಕ ಪಕ್ಕದಲ್ಲಿದ್ದ ಸಣ್ಣ ಕಾಲುವೆಗೆ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ 7 ಮಂದಿ ಸಾವಿಗೀಡಾಗಿದ್ದಾರೆ. ಬೈಕ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾಲುವೆಗೆ ಕಾರು ಬೀಳುತ್ತಿದ್ದಂತೆ ಕಾರಿನೊಳಗೆ ನೀರು ತುಂಬಿದೆ. ಇದರಿಂದ ಒಳಗೆ ಸಿಲುಕಿಕೊಂಡ ಪ್ರಯಾಣಿಕರು ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!