March 13, 2026

ಶಾಲಾ ಬಸ್ ಚಾಲನೆ ವೇಳೆಯೇ ಹೃದಯಾಘಾತ: ಚಾಲಕ ಮೃತ್ಯು

0
image_editor_output_image1715382920-1752745908061.jpg

ಹಾವೇರಿ: ಶಾಲಾ ಬಸ್ ಚಾಲನೆ ವೇಳೆಯೇ ಹೃದಯಾಘಾತದಿಂದ ಚಾಲಕ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ನಡೆದಿದೆ.

ಪಕ್ಕಿರೇಶ ಮಲ್ಲೇಶಣ್ಣನವರ್ (25) ಮೃತ ಚಾಲಕ. ಖಾಸಗಿ ಶಾಲೆಯ ಬಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ವಾಪಸ್ ಮಕ್ಕಳನ್ನು ಮನೆಗೆ ಡ್ರಾಪ್ ಮಾಡುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ.

ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಚಾಲಕ ರಸ್ತೆಬದಿಯಲ್ಲಿ ಬಸ್ ನಿಲ್ಲಿಸಿದ್ದಾರೆ. ಈ ವೇಳೆ ಮಕ್ಕಳು ಕೂಗಾಡಿ, ಚೀರಾಡಿ ಸ್ಥಳೀಯರನ್ನು ಕರೆದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ

Leave a Reply

Your email address will not be published. Required fields are marked *

error: Content is protected !!