September 22, 2026

ಉಪ್ಪಿನಂಗಡಿ: ಇಳಂತಿಲ ಗ್ರಾ.ಪಂ. ಅಧ್ಯಕ್ಷ ವಸಂತ ಕುಮಾರ್ ಶೆಟ್ಟಿ ನಿಧನ

0
image_editor_output_image-684053876-1752750368484.jpg

ಉಪ್ಪಿನಂಗಡಿ: ಇಳಂತಿಲ ಗ್ರಾ.ಪಂ. ಅಧ್ಯಕ್ಷ, ಎನ್ಮಾಡಿ ನಿವಾಸಿ ವಸಂತ ಕುಮಾರ್ ಶೆಟ್ಟಿ (49) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ನಿಧನರಾಗಿದ್ದಾರೆ.

ಕಳೆದ ಎರಡೂವರೆ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆಗೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

 

ಬಿಜೆಪಿ ಕಾರ್ಯಕರ್ತರಾಗಿದ್ದ ವಸಂತಕುಮಾ‌ರ್ ಶೆಟ್ಟಿ ಎರಡನೇ ಅವಧಿಗೆ ಇಳಂತಿಲ ಗ್ರಾ.ಪಂ.ಗೆ ಬಿಜೆಪಿ ಬೆಂಬಲಿತ ಸದಸ್ಯರಾಗಿ ಆಯ್ಕೆಯಾಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!