March 13, 2026

ದೆಹಲಿಯಲ್ಲಿ 50, ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

0
image_editor_output_image1172038882-1752822492914.jpg

ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ (Delhi) 50 ಹಾಗೂ ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ.

ದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ರಿಚ್‌ಮಂಡ್ ಶಾಲೆಗೆ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳವು ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಸದ್ಯ ಶಾಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಒಟ್ಟು ದೆಹಲಿಯ 50ಕ್ಕೂ ಅಧಿಕ ಶಾಲೆಗಳಲ್ಲಿ ಬಾಂಬ್ ಬೆದರಿಕೆ ಮೇಲ್ ಹಾಗೂ ಕರೆ ಬಂದಿದ್ದು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ. ಇನ್ನೂ ಬೆಂಗಳೂರಿನ ಆರ್‌ಆರ್ ನಗರ, ಕೆಂಗೇರಿ ಸೇರಿದಂತೆ ಒಟ್ಟು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ.

Leave a Reply

Your email address will not be published. Required fields are marked *

error: Content is protected !!