ಖ್ಯಾತ ಹಾಸ್ಯ ನಟ ಫಿಶ್ ವೆಂಕಟ್ ನಿಧನ
ಹೈದರಾಬಾದ್: ಕೋಟ ಶ್ರೀನಿವಾಸ್ ರಾವ್ ನಿಧನ ಬೆನ್ನಲ್ಲೇ ತೆಲುಗು ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಖ್ಯಾತ ಹಾಸ್ಯ ನಟ ಫಿಶ್ ವೆಂಕಟ್ (53) ಅವರು ಶನಿವಾರ ನಿಧನರಾಗಿದ್ದಾರೆ.
ತೆಲುಗು ಚಿತ್ರರಂಗದಲ್ಲಿ ಹಾಸ್ಯ ನಟನಾಗಿ ತಮ್ಮದೇ ಆದ ಛಾಪು ಮೂಡಿಸಿದ್ದ ಫಿಶ್ ವೆಂಕಟ್ ಅನಾರೋಗ್ಯದ ಕಾರಣದಿಂದಾಗಿ ಕೊನೆಯುಸಿರೆಳೆದಿದ್ದಾರೆ.
ಫಿಶ್ ವೆಂಕಟ್ ಅವರು ಟಾಲಿವುಡ್‌ನಲ್ಲಿ ಹಲವು ಚಿತ್ರಗಳಲ್ಲಿ ಖಳನಟನಾಗಿ, ಹಾಸ್ಯ ಖಳ ನಟನಾಗಿ, ಹಾಸ್ಯನಟನಾಗಿ ನಟಿಸಿ ನಗೆಯ ಹೊಳೆಯನ್ನೇ ಹರಿಸಿದ್ದರು. ಆದರೆ, ಅನಾರೋಗ್ಯ ಕಾರಣದಿಂದಾಗಿ ಕಳೆದ ಕೆಲವು ಕಾಲದಿಂದ ಸಿನಿಮಾಗಳಿಂದ ದೂರ ಉಳಿದಿದ್ದರು.




