ತನ್ನ ಕೈಯಲ್ಲಿ ಡೆತ್‌ನೋಟ್ ಬರೆದು ಮಹಿಳೆ ಆತ್ಮಹತ್ಯೆ
ಲಕ್ನೋ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ತನ್ನ ದೇಹದ ಮೇಲೆಯೇ ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ.
ಮನೀಷಾ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಆಕೆ ತೋಳು, ಕಾಲು ಹಾಗೂ ಹೊಟ್ಟೆಯ ಮೇಲೆ ನನ್ನ ಸಾವಿಗೆ ಪತಿ ಹಾಗೂ ಅತ್ತೆಯೇ ಕಾರಣ ಎಂದು ಬರೆದುಕೊಂಡಿದ್ದಾರೆ.
ಮನೀಷಾ 2023ರಲ್ಲಿ ನೋಯ್ಡಾ ನಿವಾಸಿ ಕುಂದನ್ ಅವರನ್ನು ವಿವಾಹವಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ಪತಿ ಹಾಗೂ ಅತ್ತೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಬರೆದಿದ್ದಾರೆ.




