March 13, 2026

ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಲೈನ್‍ಮೆನ್ ವಿದ್ಯುತ್ ಶಾಕ್‍ನಿಂದ  ಸಾವು

0
image_editor_output_image-1111124696-1752916043939.jpg

ಚಿಕ್ಕಮಗಳೂರು: ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಲೈನ್‍ಮೆನ್ ವಿದ್ಯುತ್ ಶಾಕ್‍ನಿಂದ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಪ್ರವೀಣ್ (26) ಎಂದು ಗುರುತಿಸಲಾಗಿದೆ. ಮೂಲತಃ ಬಾಗಲಕೋಟೆಯ ಪ್ರವೀಣ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೆಸ್ಕಾಂ ಕಚೇರಿಯಲ್ಲಿ ಲೈನ್‍ಮೆನ್ ಆಗಿ ಕೆಲಸ ಮಾಡುತ್ತಿದ್ದರು.

ಇಂದು (ಜು.18) ಹೊನ್ನೆಕೊಪ್ಪ ಗ್ರಾಮದಲ್ಲಿ ಕಂಬ ಹತ್ತಿ ಫ್ಯೂಸ್ ಹಾಕಿ ವಿದ್ಯುತ್ ಲೈನ್ ದುರಸ್ಥಿ ಮಾಡುವ ವೇಳೆ ವಿದ್ಯುತ್ ಶಾಕ್ ನಿಂದ ತೀವ್ರ ಅಸ್ವಸ್ತಗೊಂಡಿದ್ದರು. ಕಂಬದಿಂದ ಬಿದ್ದು ಅಸ್ವಸ್ಥನಾಗಿ ಒದ್ದಾಡುತ್ತಿದ್ದ ಅವರನ್ನು ಸ್ಥಳಿಯರು ಹಾಗೂ ಇತರೇ ಸಿಬ್ಬಂದಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!