March 13, 2026

ಉಪ್ಪಿನಂಗಡಿ: ಯಕ್ಷಗಾನದ ಮೇರು ಕಲಾವಿದ ಪಾತಾಳ ವೆಂಕಟರಮಣ ಭಟ್ ನಿಧನ

0
image_editor_output_image-1996362877-1752916292682.jpg

ಉಪ್ಪಿನಂಗಡಿ: ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92) ಶನಿವಾರ ಹೃದಯಾಘಾತದಿಂದ ಸ್ವಗೃಹ ಉಪ್ಪಿನಂಗಡಿಯಲ್ಲಿ ನಿಧನರಾದರು.

ತೆಂಕು ಹಾಗೂ ಬಡಗು ತಿಟ್ಟುಗಳಲ್ಲಿ ವೇಷ ಮಾಡಿ ಲಕ್ಷಾಂತರ ಯಕ್ಷಾಭಿಮಾನಿಗಳ ಮನ ಗೆದ್ದಿದ್ದರು.

16 ನವೆಂಬರ್ 1933ರಲ್ಲಿ ಪುತ್ತೂರು ಸಮೀಪದ ಬೈಪದವು ಎಂಬಲ್ಲಿ ಜನಿಸಿದ ಅವರು, ಚಿಕ್ಕಂದಿನಲ್ಲೇ ಯಕ್ಷಗಾನ ಆಸಕ್ತಿ ಬೆಳೆಸಿಕೊಂಡವರು. ಪುತ್ತೂರು ಕೃಷ್ಣ ಭಟ್ಟರಿಂದ ತೆಂಕುತಿಟ್ಟಿನ ಯಕ್ಷಗಾನ ವಿದ್ಯೆ ಕಲಿತು, ಸೌಕೂರು ಮೇಳ, 1954ರಲ್ಲಿ ಮೂಲ್ಕಿ ಮೇಳ, 1963ರಲ್ಲಿ ಧರ್ಮಸ್ಥಳ ಮೇಳಕ್ಕೆ ಸೇರಿದರು.

ಧರ್ಮಸ್ಥಳ ಮೇಳದ ತಿರುಗಾಟವು ಪಾತಾಳ ವೆಂಕಟ್ರಮಣ ಭಟ್ಟರ ಕಲಾ ಜೀವನದ ಸುವರ್ಣ ಯುಗ. ರಂಭೆ, ಊರ್ವಶಿ, ಮೇನಕೆ, ಸತ್ಯಭಾಮೆ, ದೌಪದಿ, ಮೀನಾಕ್ಷಿ ಮೊದಲಾದ ಪಾತ್ರಗಳಿಗೆ ಜೀವ ತುಂಬಿದವರು ವೆಂಕಟರಮಣ ಭಟ್ಟರು.

Leave a Reply

Your email address will not be published. Required fields are marked *

error: Content is protected !!