ಉಡುಪಿ | ರಸ್ತೆ ಡಿವೈಡರ್ಗೆ ಆ್ಯಂಬುಲೆನ್ಸ್ ಢಿಕ್ಕಿ: ರೋಗಿ ಸಾವು
ಉಡುಪಿ: ಮಣಿಪಾಲದ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸಾವನ್ನಪ್ಪಿದ ಘಟನೆ ಉಡುಪಿಯ ಎಂಜಿಎಂ ಕಾಲೇಜಿನ ಎದುರು ನಡೆದಿದೆ.
ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಈ ಆ್ಯಂಬುಲೆನ್ಸ್ ನಲ್ಲಿ ರೋಗಿಯೊಬ್ಬರನ್ನು ಕರೆದೊಯ್ಯಲಾಗುತ್ತಿತ್ತು. ಕಾಲೇಜಿನ ಬಳಿ ನಿಯಂತ್ರಣ ಕಳೆದುಕೊಂಡ ಆ್ಯಂಬುಲೆನ್ಸ್ ಡಿವೈಡರ್ ಗೆ ಹಾಗೂ ಬ್ಯಾರಿಕೇಡ್‌ಗಳಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಅಪಘಾತದ ನಂತರ, ತಕ್ಷಣ ರೋಗಿಯನ್ನು ಮತ್ತೊಂದು ಆ್ಯಂಬುಲೆನ್ಸ್‌ಗೆ ಸ್ಥಳಾಂತರಿಸಿ, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.




