September 22, 2026

ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ: ನಾಲ್ವರು ಆರೋಪಿಗಳ ಬಂಧನ

0
image_editor_output_image1212917486-1752917281932.jpg

ಕುಂದಾಪುರ: ಇಲ್ಲಿನ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಬಂಧಿತ ಆರೋಪಿಗಳು.

 

ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ ಸರಿಗೆ, 34 ಕೆಜಿ ತೂಕದ ತಾಮ್ರದ ಸರಿಗೆ, 64 ಕೆಜಿ ತೂಕದ ಹಿತ್ತಾಳೆಯ ವಸ್ತು, 20 ಕೆಜಿ ತೂಕದ ಅಲ್ಯೂಮಿನಿಯಂ ವಸ್ತು, ಫ್ರಿಡ್ಜ್ ಕಂಪ್ರಸರ್, 45 ಹಳೆಯ ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!