March 13, 2026

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ತನಿಖೆ ಪೂರ್ವದಲ್ಲೇ ಪೂರ್ವಗ್ರಹದ ತೀರ್ಮಾನಕ್ಕೆ ಬರುವುದು ಸರಿಯಲ್ಲ: ಯು.ಟಿ. ಖಾದರ್

0
image_editor_output_image-1329061520-1753084249527.jpg

ಮಂಗಳೂರು: ವ್ಯಕ್ತಿಯೊಬ್ಬರ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚನೆ ಮಾಡಿದೆ. ಸಮರ್ಪಕ ತನಿಖೆ ನಡೆದು ಸತ್ಯ ಸಂಗತಿ ಹೊರಬಂದು, ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ತನಿಖೆ ಪೂರ್ವದಲ್ಲೇ ಪೂರ್ವಗ್ರಹದ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಸ್ಪೀಕ‌ರ್ ಯು.ಟಿ. ಖಾದರ್ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಿಧಾನಸಭೆಯ ಮುಂಗಾರು ಅಧಿವೇಶನವು ಆಗಸ್ಟ್ 11ರಿಂದ 22ರವರೆಗೆ ನಡೆಯಲಿದೆ ಎಂದು ಸ್ಪೀಕ‌ರ್ ಯು.ಟಿ. ಖಾದರ್ ಹೇಳಿದರು.

ಅಧಿವೇಶನದ ಅವಧಿ ವಿಸ್ತರಣೆ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಕಮಿಟಿ ಚರ್ಚಿಸಿ ಅಂತಿಮಗೊಳಿಸುತ್ತದೆ ಎಂದರು.

Leave a Reply

Your email address will not be published. Required fields are marked *

error: Content is protected !!