ಮುಡಾ ಪ್ರಕರಣ: ಸಿದ್ದರಾಮಯ್ಯರ ಪತ್ನಿ ವಿರುದ್ಧದ ಸಮನ್ಸ್ ರದ್ದು ವಿಚಾರ: ಈಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ವಿರುದ್ಧ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಈಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಈ ವೇಳೆ ದೇಶದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ಗಂಭೀರವಾಗಿ ಪ್ರತಿಕ್ರಿಯಿಸಿ, “ನ್ಯಾಯಾಲಯದ ಹೊರಗೆ ಮತದಾರರ ಮಧ್ಯೆ ರಾಜಕೀಯ ಹೋರಾಟಗಳು ನಡೆಯಲಿ, ಅದಕ್ಕಾಗಿ ಈಡಿಯನ್ನು ಏಕೆ ಉಪಯೋಗಿಸುತ್ತಿದ್ದಾರೆ?” ಎಂದು ಪ್ರಶ್ನಿಸಿತು.




