ಕೇರಳದ ಮಾಜಿ ಸಿಎಂ, CPI(M) ನಾಯಕ ಅಚ್ಯುತಾನಂದನ್ ನಿಧನ
ತಿರುವನಂತಪುರಂ: ಕಳೆದ ಕೆಲ ವರ್ಷಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ.ಎಸ್ ಅಚ್ಯುತಾನಂದನ್ (101) ಇಂದು ಕೊನೆಯುಸಿರೆಳೆದಿದ್ದಾರೆ.
ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಜೂನ್ 23 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಿರುವನಂತಪುರದ ಎಸ್‌ಯುಟಿ ಆಸ್ಪತ್ರೆಯಲ್ಲಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಚ್ಯುತಾನಂದನ್ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ಹಾಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಆಸ್ಪತ್ರೆಗೆ ಭೇಟಿ ನೀಡಿ, ಅಚ್ಯುತಾನಂದನ್ ಅವರ ಆರೋಗ್ಯ ಸ್ಥಿತಿ ವಿಚಾರಿಸಿದ್ದರು. ವೈದ್ಯಕೀಯ ಮಂಡಳಿಯೊಂದಿಗೂ ಚರ್ಚೆ ನಡೆಸಿದ್ದರು. ಆದ್ರೆ ಮಧ್ಯಾಹ್ನದ ಹೊತ್ತಿಗೆ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿತ್ತು.





