May 4, 2026

ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ: ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ

0
4b0sg408_air-india-mumbai_650x400_21_July_25.jpg

ಮುಂಬೈ: ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನವೊಂದು ರನ್‌ವೇ ಯಲ್ಲೇ ಜಾರಿದ ಘಟನೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.

ಕೇರಳದ ಕೊಚ್ಚಿಯಿಂದ ಪ್ರಯಾಣಿಕರನ್ನು ಹೊತ್ತ AI 2744 ವಿಮಾನ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಭಾರೀ ಮಳೆಯ ಪರಿಣಾಮ ರನ್‌ವೇಯಿಂದ ಜಾರಿದ್ದು, ಅವಘಡದಿಂದ ವಿಮಾನ ಎಂಜಿನ್ ಗೆ ಹಾನಿಯಾಗಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದ್ದು ಅದೃಷ್ಟವಶಾತ್ ಪ್ರಯಾಣಿಕರಿಗಾಗಲಿ, ಸಿಬ್ಬಂದಿಗಳಿಗಾಗಲಿ ಯಾವುದೇ ತೊಂದೆರೆಯಾಗದೆ ಎಲ್ಲರೂ ಸುರಕ್ಷಿತವಾಗಿದ್ದಾರೆ ಘಟನೆಯಲ್ಲಿ ವಿಮಾನ ಹಾಗೂ ರನ್‌ವೇ ಹಾನಿಯಾಗಿದೆ ಎಂದು ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (CSMIA) ವಕ್ತಾರರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!