September 22, 2026

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್‌ ರಾಜೀನಾಮೆ

0
AA1FBWKf.webp

ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್‌ ಅವರು ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ.

ಧನ್ಕರ್‌ ಅವರು ರಾಜೀನಾಮೆ ಪತ್ರದಲ್ಲಿ ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಲು ಹಾಗೂ ವೈದ್ಯಕೀಯ ಸಲಹೆಯನ್ನು ಪಾಲಿಸಬೇಕಿರುವುದರಿಂದ ಈ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

 

ಸಂವಿಧಾನದ ವಿಧಿ 67(ಎ) ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನನ್ನ ರಾಜೀನಾಮೆಯನ್ನು ಸಲ್ಲಿಸುತ್ತೇನೆ,” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಧನ್ಕರ್‌ ಅವರು 2022ರಲ್ಲಿ ಉಪ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!