ಅಬುದಾಬಿ: ಕೇರಳದ ಮಹಿಳೆ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ
ಅಬುಧಾಬಿ: ಕೇರಳದ ಮಹಿಳೆಯೊಬ್ಬರು ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆದಿದೆ.
ಕೇರಳದ ಕೊಲ್ಲಂ ಮೂಲದ ಅತುಲ್ಯ ಶೇಖರ್ (29) ಮೃತ ಮಹಿಳೆ. 2014ರಲ್ಲಿ ಅತುಲ್ಯ ಕೊಲ್ಲಂ ನಿವಾಸಿ ಶೇಖರ್ ಎಂಬವರನ್ನು ಮದುವೆಯಾಗಿ ಶಾರ್ಜಾದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನೆಲೆಸಿದ್ದರು.
ಮದುವೆ ವೇಳೆ ಸತೀಶ್‌ಗೆ 320 ಗ್ರಾಂ ಚಿನ್ನ ಹಾಗೂ ಒಂದು ಬೈಕ್ ಅನ್ನು ವರದಕ್ಷಿಣೆ ರೂಪದಲ್ಲಿ ನೀಡಲಾಗಿತ್ತು. ಆದರೆ ಮದುವೆಯಾದಾಗಿನಿಂದ ಪತಿ ಅತುಲ್ಯಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.





