ರ‍್ಯಾಗಿಂಗ್‌ಗೆ ಹೆದರಿ ಆರ್ಕಿಟೆಕ್ಚರ್ ವಿದ್ಯಾರ್ಥಿ ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆ
ನೆಲಮಂಗಲ: ಇಲ್ಲಿನ ನಂದರಾಮಯ್ಯನ ಪಾಳ್ಯದಲ್ಲಿ ರ‍್ಯಾಗಿಂಗ್‌ಗೆ ಹೆದರಿ ಆರ್ಕಿಟೆಕ್ಚರ್ ವಿದ್ಯಾರ್ಥಿ ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅರುಣ್ (22) ಆರ್ಕಿಟೆಕ್ಚರ್ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಚನ್ನಕೇಶವ ಹಾಗೂ ತುಳಸಿ ದಂಪತಿ ಹಿರಿಯ ಮಗ ಅರುಣ್ ಮೂಲತಃ ಹಾಸನದವನಾಗಿದ್ದ. ಮನೆಯಲ್ಲಿ ಕಡು ಬಡತನವಿದ್ದರಿಂದ ಕೆಲಸ ಹುಡುಕಿಕೊಂಡು ಬಂದು ನಂದರಾಮಯ್ಯನ ಪಾಳ್ಯದಲ್ಲಿ ನೆಲೆಸಿದ್ದರು.





