March 13, 2026

ಪುತ್ತೂರು: ಬಸ್ಸಿನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ: ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

0
first-information-report

ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್‌ ನಲ್ಲಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜು.22ರ ಮಂಗಳವಾರ ಸಂಜೆ ನಡೆದಿದೆ.

ಕೆಎಸ್‌ಆರ್‌ಟಿಸಿ ವೇಗದೂತ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅದೇ ಬಸ್ ನಲ್ಲಿದ್ದ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದ. ಇದರ ಬಗ್ಗೆ ಮಾಹಿತಿ ಪಡೆದ ತಂಡ ಪುತ್ತೂರು ಬಸ್‌ ನಿಲ್ದಾಣದಲ್ಲಿ ಆತನಿಗಾಗಿ ಕಾದು ಕುಳಿತಿದ್ದರು. ವಿಷಯ ತಿಳಿದ ಆರೋಪಿ ಬಸ್ ನಿಂದ ಇಳಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಅಂಗಡಿಯೊಂದರಲ್ಲಿ ಅಡಗಿ ಕುಳಿತಿದ್ದ ಎನ್ನಲಾಗಿದೆ. ಆದರೆ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅ ವೇಳೆಗಾಗಲೇ ಹಲವು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು. ಇದರಿಂದಾಗಿ ಸ್ಥಳದಲ್ಲಿ ತುಸು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದೊಯ್ದರು

ಆರೋಪಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್‌ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!