September 22, 2026

ಮಂಗಳೂರು: ನಾಳೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ:

0
38b04ccb0dbdb3bb822f0e607d4da8da

ಮಂಗಳೂರು: ಕರ್ನಾಟಕ ರಾಜ್ಯದಾದ್ಯಂತ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ ಜುಲೈ 24ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

 

ಈ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ (204.5 ಮಿಮೀಗಿಂತ ಹೆಚ್ಚು) ನಿರೀಕ್ಷಿಸಲಾಗಿದೆ. ಈ ಕಾರಣದಿಂದಾಗಿ, ಈ ಜಿಲ್ಲೆಗಳಲ್ಲಿ ವಾಸಿಸುವ ಜನರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ ಬುಧವಾರ ಬೆಳಗ್ಗಿನ ಮಾಹಿತಿಯಂತೆ ಕಳೆದ 24 ಗಂಟೆಯಲ್ಲಿ ಬಿದ್ದ ಮಳೆಯಲ್ಲಿ 53.1 ಮಿ.ಮೀ ಮಂಗಳೂರಿನಲ್ಲೇ ಹೆಚ್ಚು ಮಳೆಯಾಗಿದೆ.

ಜುಲೈ 26ರವರೆಗೆ ಅರಬ್ಬಿ ಸಮುದ್ರದಲ್ಲಿ ಸಮುದ್ರದಲ್ಲಿ ಮಳೆ ಮತ್ತು ಭಾರಿ ಗಾಳಿ ಬೀಸುವುದರಿಂದ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!