March 22, 2026

ವಿಟ್ಲ: ಜನಪ್ರಿಯ ಸೆಂಟ್ರಲ್ ಸ್ಕೂಲ್ ವಿಸ್ತರಣಾ ಕಟ್ಟಡಕ್ಕೆ ಶಂಕುಸ್ಥಾಪನೆ

0
IMG-20211223-WA0103.jpg

ವಿಟ್ಲ: ಕಂಬಳಬೆಟ್ಟುವಿನ ಪ್ರತಿಷ್ಠಿತ ಜನಪ್ರಿಯ ಸೆಂಟ್ರಲ್ ಸ್ಕೂಲ್ ಕ್ಯಾಂಪಸ್ ನಲ್ಲಿ ಸಿಬಿಎಸ್ಸಿಇ ಮಾರ್ಗಸೂಚಿಗೆ ಅನುಸಾರ ನಾಲ್ಕು ಅಂತಸ್ತಿನ ವಿಸ್ತರಣಾ ಕಟ್ಟಡಕ್ಕೆ ಶಿಲಾನ್ಯಾಸ ನಡೆಸಲಾಯಿತು.

ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಅವರು ಶಿಲಾನ್ಯಾಸ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು ಈ ಸಂಸ್ಥೆ ಇನ್ನೂ ಎತ್ತರಕ್ಕೆ ಬೆಳೆದು ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ನೀಡುವಂತಾಗಲಿ ಎಂದು ಆಶೀರ್ವಚನ ನೀಡಿದರು.

ಶಾಲೆಯ ಚೇರ್ಮನ್ ಡಾಕ್ಟರ್ ಅಬ್ದುಲ್ ಬಶೀರ್ ವಿ ಕೆ, ಶಾಲಾ ಮ್ಯಾನೇಜ್ಮೆಂಟ್ ಟ್ರಸ್ಟಿಗಳು, ಶಾಲಾ ಸಿಬ್ಬಂದಿ ಹಾಗೂ ವಿವಿಧ ಕ್ಷೇತ್ರದ ಅನೇಕ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!