March 13, 2026

ಸುಬ್ರಹ್ಮಣ್ಯ: ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ನಾಪತ್ತೆ: ನದಿಗೆ ಹಾರಿರುವ ಶಂಕೆ, ಕುಮಾರಧಾರ ನದಿಯಲ್ಲಿ ಶೋಧ ಕಾರ್ಯ ಆರಂಭ

0
n6737784861753335975258c62e177d52329682911f88a1d26f3e4a23fae00a86316d5c298551edf6f71fe0.jpg

ಸುಬ್ರಹ್ಮಣ್ಯ: ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆ (52) ಜುಲೈ 22 ರಂದು ನಾಪತ್ತೆಯಾಗಿದ್ದಾರೆ. ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ.

ಮೂಲಗಳ ಪ್ರಕಾರ, ಹೊನ್ನಪ್ಪ ಅವರು ಜುಲೈ 22 ರ ಬೆಳಗ್ಗೆ ಕರ್ತವ್ಯಕ್ಕೆಂದು ಮನೆಯಿಂದ ಹೊರಟವರು ಬಳಿಕ ಕಾಣೆಯಾಗಿದ್ದಾರೆ. ಅಗ್ರಹಾರ ದೇವಸ್ಥಾನದ ಬಳಿಯಿಂದಾಗಿ ಕುಮಾರಧಾರ ನದಿಯ ಕಡೆಗೆ ಹೋಗುತ್ತಿರುವುದು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ. ಈ ಹಿನ್ನೆಲೆ ಅವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಕುಮಾರಧಾರ ನದಿಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಎಸ್‌ಡಿಆರ್‌ಎಫ್ ತಂಡ ಮತ್ತು ಈಜುಗಾರರು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಕೂಡ ಶೋಧ ಕಾರ್ಯಕ್ಕೆ ಸಹಕರಿಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!