ಅನಿಲ್ ಅಂಬಾನಿ ಮಾಲಕತ್ವದ ರಿಲಾಯನ್ಸ್ ಗ್ರೂಪ್ ಗೆ ಸೇರಿದ 50 ಕಂಪನಿಗಳ ಮೇಲೆ ಈ.ಡಿ ದಾಳಿ
ನವದೆಹಲಿ: ಯೆಸ್ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಅನಿಲ್ ಅಂಬಾನಿ ಮಾಲಕತ್ವದ ರಿಲಾಯನ್ಸ್ ಗ್ರೂಪ್ಗೆ ಸೇರಿದ ಹಲವು ಕಂಪನಿಗಳ ಮೇಲೆ ದಾಳಿ ಮಾಡಿದೆ.
ವರದಿಗಳ ಪ್ರಕಾರ ಗ್ರೂಪ್ಗೆ ಸೇರಿದ 35ಕ್ಕೂ ಹೆಚ್ಚು ಸ್ಥಳಗಳು ಹಾಗು 50 ಕಂಪನಿಗಳ ಮೇಲೆ ಇಡಿ ರೇಡ್ ಮಾಡಿರುವುದು ತಿಳಿದುಬಂದಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯಾದ ಪಿಎಂಎಲ್ಎ ಆ್ಯಕ್ಟ್ ಸೆಕ್ಷನ್ 17 ಅಡಿಯಲ್ಲಿ ಇಡಿಯಿಂದ ಈ ದಾಳಿ ಆಗಿದೆ.
3,000 ಕೋಟಿ ರೂ ಮೊತ್ತದ ಯೆಸ್ ಬ್ಯಾಂಕ್ ವಂಚನೆಯ ಈ ಪ್ರಕರಣದಲ್ಲಿ ಸಿಬಿಐ ಎರಡು ಎಫ್ಐಆರ್ಗಳನ್ನು ದಾಖಲಿಸಿದೆ. ಇದರ ಆಧಾರದ ಮೇಲೆ ಹಾಗೂ ಸೆಬಿ, ಬ್ಯಾಂಕ್ ಆಫ್ ಬರೋಡಾ, ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಮತ್ತಿತರ ಏಜೆನ್ಸಿಗಳಿಂದ ದೊರೆತ ಮಾಹಿತಿ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು ಈ ಕ್ರಮ ತೆಗೆದುಕೊಂಡಿದೆ.




