March 13, 2026

ಕಾಸರಗೋಡು: ಚೆರುವತ್ತೂರಿನ ವೀರಾಮಲ ಬೆಟ್ಟದಲ್ಲಿ ಮತ್ತೆ ಭೂ ಕುಸಿತ್: ಕೇರಳ, ಕನ್ಯಾಕುಮಾರಿ- ಪನ್ವೇಲ್ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್

0
image_editor_output_image1821823078-1753340390830.jpg

ಕಾಸರಗೋಡು: ಕಾಸರಗೋಡಿನ ಚೆರುವತ್ತೂರಿನ ವೀರಾಮಲ ಬೆಟ್ಟ ಕುಸಿತವಾಗಿದ್ದು, ಕೇರಳ, ಕನ್ಯಾಕುಮಾರಿ- ಪನ್ವೇಲ್ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಮಾಡಲಾಗಿದೆ.

ಸದ್ಯ ಸಂಚಾರಕ್ಕೆ ಬದಲಿ ರಸ್ತೆ ಮಾರ್ಗವನ್ನು ಸ್ಥಳೀಯಾಡಳಿತ ಸೂಚಿಸಿದ್ದು, ಮಣ್ಣು ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ಹೆದ್ದಾರಿಯಲ್ಲಿ ಹೆಚ್ಚಿನ ವಾಹನ ಸಂಚಾರ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ.

ಈ ಹಿಂದೆಯೂ ಇದೆ ಭಾಗದಲ್ಲಿ ಭೂ ಕುಸಿತವಾಗಿ ಮಣ್ಣಿನಡಿ ಸಿಲುಕಿ ಕಾರ್ಮಿಕರು ಪಾರಾಗಿದ್ದರು. ಈ ಭಾಗದಲ್ಲಿ ಹಲವು ಸಮಯದಿಂದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಇಂದು ಮಧ್ಯಾಹ್ನದ ವೇಳೆಗೆ ಸಂಚಾರ ಸಾಮಾನ್ಯ ಸ್ಥಿತಿಗೆ ಬರುವ ನಿರೀಕ್ಷೆಯಿದೆ. ಸದ್ಯ ಸ್ಥಳಕ್ಕೆ ಕಾಸರಗೋಡು ಎಸ್.ಪಿ ವಿಜಯ್ ಭರತ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!