March 13, 2026

ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್, ಗೂಡ್ಸ್‌ ಕಂಟೈನರ್‌ ನಡುವೆ ಢಿಕ್ಕಿ: ಬಸ್ ಚಾಲಕ ಸೇರಿ ನಾಲ್ವರಿಗೆ ಗಂಭೀರ ಗಾಯ

0
image_editor_output_image217652419-1753346967524.jpg

ಶಿವಮೊಗ್ಗ : ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಗೂಡ್ಸ್‌ ಕಂಟೈನರ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ ಸಾಗರ ರಸ್ತೆಯ ಮುಂಬಾಳ್ ತಿರುವಿನಲ್ಲಿ ನಡೆದಿದೆ.

ಘಟನೆಯಲ್ಲಿ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸಾಗರದಿಂದ ಶಿವಮೊಗ್ಗಕ್ಕೆ ತಿರುಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಆನಂದಪುರ ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಗೂಡ್ಸ್ ಕಂಟೈನರ್ ಮುಖಾಮುಖಿ ಡಿಕ್ಕಿಯಾಗಿದೆ.

ಕೆ ಎಸ್ ಆರ್ ಟಿ ಸಿ ಬಸ್‌ನಲ್ಲಿ ಸಾಗರದಿಂದ ಶಿವಮೊಗ್ಗ ಕಾಲೇಜಿಗೆ ತೆರಳುವಂತಹ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಎಲ್ಲರೂ ಗಾಯಗೊಂಡಿದ್ದಾರೆ.

ಗಾಯಗೊಂಡವರಿಗೆ ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!