ಮಡಿಕೇರಿ: ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ
ಮಡಿಕೇರಿ: ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ.
ಎಮ್ಮೆಮಾಡು ಗ್ರಾಮದ ನಿವಾಸಿ ನರ್ಜೀ ಎಂಬುವವರ ಪತ್ನಿ ಸಫ್ರೀನಾ ಶೇಕ್ (32) ಸಾವನ್ನಪ್ಪಿರುವ ಶಿಕ್ಷಕಿ.
ಮೃತರ ಕುಟುಂಬಸ್ಥರ ಆರೋಪದ ಹಿನ್ನೆಲೆ ಇದೊಂದು ಸಂಶಯಾಸ್ಪದ ಸಾವೆಂದು ಪ್ರಕರಣ ದಾಖಲಾಗಿದೆ.
ಸಫ್ರೀನ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬುಧವಾರ ಮಧ್ಯರಾತ್ರಿ ಎಮ್ಮೆಮಾಡುವಿನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಸಫ್ರೀನಾ ಅವರನ್ನು ಪತಿ ನಜೀರ್ ನಾಪೋಕ್ಲುವಿನ ಆಸ್ಪತ್ರೆಗೆ ಕರೆತಂದರಾದರೂ ಅಷ್ಟೊತ್ತಿಗಾಗಲೇ ಸಫ್ರೀನಾ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.





