March 13, 2026

ಗಂಗೊಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಇಬ್ಬರಿಗೆ ಗಾಯ

0
image_editor_output_image-433979219-1753426440372.jpg

ಗಂಗೊಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮುಳ್ಳಿಕಟ್ಟೆ ರಿಕ್ಷಾ ನಿಲ್ದಾಣ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಬೈಂದೂರು ಕಡೆಯಿಂದ ಬರುತ್ತಿದ್ದ ಕಾರು, ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಪಲ್ಟಿಯಾಗಿ ರಸ್ತೆಯ ಬದಿ ಬಿದ್ದಿದ್ದು, ಇದರಿಂದ ಕಾರಿನಲ್ಲಿದ್ದ ತಾಜುದ್ದೀನ್ ಹಾಗೂ ಚಾಲಕನ ತಾಜ್ಮುಲ್ ಎಂಬವರು ತೀವ್ರವಾಗಿ ಗಾಯ ಗೊಂಡಿದ್ದಾರೆ.

ಕಾರು ಸಂಪೂರ್ಣ ಜಖಂಗೊಂಡಿದ್ದು, ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!