March 13, 2026

ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಾಸ್ಪವಾಗಿ ಸಾವು

0
image_editor_output_image-1360324261-1753440530015.jpg

ನೆಲಮಂಗಲ: ಮಹಿಳೆಯೊಬ್ಬಳು ಅನುಮಾನಾಸ್ಪವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಸ್ಪಂದನಾ (24) ಎಂದು ಗುರುತಿಸಲಾಗಿದೆ. ಗುರುವಾರ ಭೀಮನ ಅಮಾವಾಸ್ಯೆ ಹಿನ್ನೆಲೆ ಪತಿ ಅಭಿಷೇಕ್, ಹೆಂಡತಿ ಕೈಯಲ್ಲಿ ಪೂಜೆ ಮಾಡಿಸಿಕೊಂಡಿದ್ದ ಎನ್ನಲಾಗಿದೆ.

ಸ್ಪಂದನಾ ಕಾಲೇಜಿಗೆ ಹೋಗುತ್ತಿದ್ದ ಸಮಯದಲ್ಲಿ ಅಭಿಷೇಕ್ ಎಂಬಾತನನ್ನು ಪ್ರೀತಿಸಿ ರಿಜಿಸ್ಟರ್‌ ಮ್ಯಾರೇಜ್ ಆಗಿದ್ದಳು. ಸ್ಪಂದನಾ ಪೋಷಕರ ವಿರೋಧದ ನಡುವೆಯೇ ಇಬ್ಬರು ಮದುವೆಯಾಗಿದ್ದರು.

ಮದುವೆಯಾದ ಬಳಿಕ ಪತಿ ಕುಟುಂಬಸ್ಥರು ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಬಗ್ಗೆ ಸ್ಪಂದನಾ ತಂದೆ ಬಳಿ ಹೇಳಿಕೊಂಡಿದ್ದಳು. ಬಳಿಕ 5 ಲಕ್ಷ ರೂ. ಹಣವನ್ನ ಕೊಟ್ಟು ರಾಜಿ ಸಂಧಾನ ಮಾಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!