September 22, 2026

ಕಡಬ: ನಾಪತ್ತೆಯಾಗಿದ್ದ ಆ್ಯಂಬುಲೆನ್ಸ್‌ ಚಾಲಕನ ಮೃತದೇಹ ನದಿಯಲ್ಲಿ ಪತ್ತೆ

0
image_editor_output_image861005195-1753441966621.jpg

ಕಡಬ: ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ಆ್ಯಂಬುಲೆನ್ಸ್‌ ಚಾಲಕ ಹೊನ್ನಪ್ಪ ದೇವರಗದ್ದೆ ಮೃತದೇಹ ಇಂದು ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.

ಹೊನ್ನಪ್ಪ ಜು.22 ರಿಂದ ನಾಪತ್ತೆಯಾಗಿದ್ದರು.ಅವರು ಕುಮಾರಧಾರ ನದಿಯತ್ತ ಓಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

 

ಹೀಗಾಗಿ ಹೊನ್ನಪ್ಪ ನದಿಗೆ ಹಾರಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಪತ್ನಿ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳೆದ ಮೂರು ದಿನಗಳಿಂದ ಶೋಧ ಕಾರ್ಯ ಆರಂಭಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!