ಬಂಟ್ವಾಳ: ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ
ಬಂಟ್ವಾಳ: ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಮೇ 27ರಂದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುದು ಗ್ರಾಮದ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.





