March 22, 2026

ಕಾಂಗ್ರೆಸ್ ಸೇರುವ ಬಗ್ಗೆ ಏನೂ ಯೋಚಿಸಿಲ್ಲ; ಸಚಿವ ಎಸ್.ಟಿ ಸೋಮಶೇಖರ್

0
somashekar-dh-1024220-1630081370.jpg

ಬೆಂಗಳೂರು: ಸಾರ್ವತ್ರಿಕ ಚುನಾವಣೆಗೆ ಇನ್ನೂ ಸಮಯವಿದೆ. ಕಾಂಗ್ರೆಸ್ ಸೇರುವ ಬಗ್ಗೆ ಏನೂ ಯೋಚಿಸಿಲ್ಲ. ಸದ್ಯ ಬಿಜೆಪಿಯಲ್ಲಿ ಇದ್ದೇನೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.

ಕಾಂಗ್ರೆಸ್ ಗೆ ವಾಪಸ್ಸಾಗುವ ವದಂತಿ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ಕೆ ಶಿವಕುಮಾರ್ ನಮ್ಮ ಹಳೆಯ ಸ್ನೇಹಿತರು

ರಾಜಕೀಯವೇ ಬೇರೆ, ಸ್ನೇಹವೇ ಬೇರೆ. ಕೆಲವೊಮ್ಮೆ ಮುಖಾಮುಖಿಯಾದಾಗ‌ ಪರಸ್ಪರ ಕುಶಲೋಪರಿ ಮಾತನಾಡುತ್ತೇವೆ. ಸದ್ಯಕ್ಕೆ ನಾನು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಗೆ ವಾಪಸ್ಸಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಾಯಕತ್ವ ಬದಲಾವಣೆ ವದಂತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರು ಆಗಾಗ್ಗೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಬದಲಾವಣೆಯಾಗುವುದಿಲ್ಲ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ. ಈಗಾಗಲೇ ಅಮಿತ್ ಶಾ ಕೂಡ ಇದನ್ನ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

Leave a Reply

Your email address will not be published. Required fields are marked *

error: Content is protected !!