December 18, 2025

ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವು

0
image_editor_output_image1473781278-1753519125977.jpg

ಜೈಪುರ: ಝಲಾವರ್‌ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಈ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಶುಕ್ರವಾರ ಬೆಳಗ್ಗೆ ಶಾಲೆ ಶುರುವಾದ ವೇಳೆ ಈ ಅವಘಡ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದು ಈ ದುರಂತ ಸಂಭವಿಸಿದೆ.

ಸದ್ಯ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆದಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ಗಾಯಾಳು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!