ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಜೈಪುರ: ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ.
ಗುರುವಾರ ರಾತ್ರಿ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಅಂತಿಮ ವರ್ಷದ ಬಿಡಿಎಸ್ ವಿದ್ಯಾರ್ಥಿನಿ ಶ್ವೇತಾ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆಕೆಯ ರೂಮ್‌ಮೇಟ್ ಶ್ವೇತಾ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ಹಾಸ್ಟೆಲ್ ಅಧಿಕಾರಿಗಳಿಗೆ ತಿಳಿಸಿದ್ದಾಳೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.





