ಮಾಣಿ: ಚಾಲಕನ ನಿಯಂತ್ರಣ ಕಳೆದು ಕಾರು ಪಲ್ಟಿ
ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಾಣಿ ಸಮೀಪ ಬೋಲ್ಲೂ ಕಲ್ಲು ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಅಪಘಾತ ಪರಿಣಾಮ ಕಾರಿನಲ್ಲಿದ್ದ ಚಾಲಕ ಸಹಿತ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ತುಂಬಿದ್ದು, ಇದರಿಂದ ನಿರಂತರ ಅಪಘಾತ ಸಂಭವಿಸುತ್ತಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ




