September 22, 2026

ಮಡಿಕೇರಿ: ಗಾಳಿ ಮಳೆಗೆ ಕುಸಿದು ಬಿದ್ದ ಮನೆ: ಓರ್ವ ಮಹಿಳೆ ಮೃತ್ಯು

0
image_editor_output_image1549633280-1753531120989.jpg

ಕೊಡಗು: ರಾಜ್ಯದ ಹಲವೆಡೆ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಕೊಡಗಿನಲ್ಲಿ ನಿನ್ನೆ ರಾತ್ರಿಯಿಂದಲೇ ಗಾಳಿ ಮಳೆಯಾಗುತ್ತಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿ ಇಂದು ಬೆಳಗ್ಗೆ 5:30ರ ಸುಮಾರಿಗೆ ಸುರಿದ ಗಾಳಿ ಮಳೆಗೆ ಮನೆ ಕುಸಿದು ಬಿದ್ದಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ.

 

37 ವರ್ಷದ ಸುಷ್ಮಾ ಮೃತ ಮಹಿಳೆ. ಮಣ್ಣಿನ ಗೋಡೆ ಕುಸಿದು ತಲೆಭಾಗಕ್ಕೆ ಬಿದ್ದ ಹಿನ್ನಲೆ ಸುಷ್ಮಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಹಾಗೂ ಸಹೋದರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!