March 13, 2026

ಕಾಂಗ್ರೆಸ್ ಮುಖಂಡ, ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ

0
image_editor_output_image-251293548-1753605396864

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಹತ್ಯೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅಚ್ಚಲು ಗ್ರಾಮದ ಮಾಜಿ ಅಧ್ಯಕ್ಷ, ಹೊಂಗಾಣಿದೊಡ್ಡಿ ಗ್ರಾಮದ ನಂಜೇಶ್ (45) ಮೃತ ವ್ಯಕ್ತಿ. ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

ರಾತ್ರಿ ಡಾಬವೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ದಾಳಿ ಮಾಡಲಾಗಿದೆ. ನಾಲ್ಕೈದು ಜನರ ತಂಡದಿಂದ ದಾಳಿ ನಡೆಸಲಾಗಿದೆ.

ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!