March 13, 2026

ಮಂಗಳೂರು: 200 ಕೋಟಿ ರೂ.ಗೂ ಹೆಚ್ಚು ವಂಚನೆ: ಆರೋಪಿ ರೋಶನ್ ಸಲ್ದಾನ ವಿರುದ್ಧದ ತನಿಖಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ

0
image_editor_output_image-1006089748-1753688120624.jpg

ಮಂಗಳೂರು: ಸಾಲಕೊಡುವ ನೆಪದಲ್ಲಿ ಸುಮಾರು 200 ಕೋಟಿ ರು.ಗೂ ಹೆಚ್ಚು ವಂಚನೆ ನಡೆಸಿದ್ದಾನೆ ಎನ್ನಲಾದ ಬಹುಕೋಟಿ ವಂಚಕ ರೋಶನ್ ಸಲ್ದಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ರಿಲೀಫ್ ನೀಡಿದೆ.

ಬಿಹಾರದ ಉದ್ಯಮಿಗೆ ಹತ್ತು ಕೋಟಿ ವಂಚನೆ ಮತ್ತು ಮಂಗಳೂರಿನ ವ್ಯಕ್ತಿಗೆ ಒಂದೂವರೆ ಕೋಟಿ ವಂಚನೆ ಪ್ರಕರಣದಲ್ಲಿ ಹೈ ಕೋರ್ಟ್ ಪೊಲೀಸರ ತನಿಖಾ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಇತ್ತೀಚೆಗೆ ಸಾಲ ನೀಡುವ ನೆಪದಲ್ಲಿ ಭಾರೀ ವಂಚನೆ ನಡೆಸಿದ ಜಾಲದಲ್ಲಿ ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ರೋಶನ್ ಸಲ್ದಾನ ಎಂಬಾತನನ್ನು ಸಿಇಎನ್ ಪೊಲೀಸರು ಬಂಧಿಸಿದ್ದರು.

Leave a Reply

Your email address will not be published. Required fields are marked *

error: Content is protected !!