March 13, 2026

ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಕ್ಕ

0
image_editor_output_image-1786615603-1753689849623.jpg

ಚಿತ್ರದುರ್ಗ: ಹೆಚ್‌ಐವಿ ಪೀಡಿತನೆಂಬ ಕಾರಣಕ್ಕೆ ಸ್ವಂತ ತಮ್ಮನನ್ನೇ ಅಕ್ಕ ತನ್ನ ಗಂಡನೊಂದಿಗೆ ಸೇರಿ ಕೊಲೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ನಡೆದಿದೆ.

ಮಲ್ಲಿಕಾರ್ಜುನ್ (23) ಕೊಲೆಯಾದ ಸಹೋದರ, ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್ ಕೊಲೆ ಆರೋಪಿ. ದುಮ್ಮಿ ಗ್ರಾಮದ ನಾಗರಾಜ್‌ ಎನ್ನುವವರ ಪುತ್ರ ಮಲ್ಲಿಕಾರ್ಜುನ್‌ ಬೆಂಗಳೂರಿನ ಗಾರ್ಮೆಂರ್ಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದ.

ಇದೇ ಜುಲೈ 23ರಂದು ತನ್ನ ಸ್ವಗ್ರಾಮವಾದ ದುಮ್ಮಿಗೆ ಕಾರಲ್ಲಿ ಸ್ನೇಹಿತರೊಂದಿಗೆ ಬರುತ್ತಿದ್ದ‌. ಆಗ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ಆದ ಕಾರಿನ ಅಪಘಾತದಲ್ಲಿ ಆತನ ಕಾಲು ಮುರಿವಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿದ್ದ.

ಅಪಘಾತಗೊಂಡಿದ್ದ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ನೀಡಲಾಗಿತ್ತು. ರಕ್ತ ಪರೀಕ್ಷೆ ವೇಳೆ ಮಲ್ಲಿಕಾರ್ಜುನ್‌ಗೆ ಹೆಚ್‌ಐವಿ ಕಾಯಿಲೆ ಇದೆ ಅನ್ನೋದು ಗೊತ್ತಾಯಿತು.

ಜುಲೈ 25ರಂದು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯಿಂದ‌ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ ಅಂಬುಲೆನ್ಸ್‌ನಲ್ಲೇ ಮಲ್ಲಿಕಾರ್ಜುನನ್ನ ಅಕ್ಕನೇ ಕೊಲೆಗೈದಿದ್ದಾಳೆ. ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್ ಸೇರಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!