ಶಿವಮೊಗ್ಗ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ ಢಿಕ್ಕಿ: ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರು ಸಾವು, 13ಕ್ಕೂ ಅಧಿಕ ಮಂದಿಗೆ ಗಾಯ
ಶಿವಮೊಗ್ಗ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರು ಸಾವನಪ್ಪಿ 13ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಗಾಜನೂರು ಅಗ್ರಹಾರ ಬಳಿ ತೀರ್ಥಹಳ್ಳಿ-ಶಿವಮೊಗ್ಗ ರಸ್ತೆಯಲ್ಲಿ ನಡೆದಿದೆ.
ದುರ್ಗಾಂಬಾ ಹೆಸರಿನ ಖಾಸಗಿ ಬಸ್ ಮಂಗಳೂರಿನಿಂದ ರಾತ್ರಿ ಹೊರಟಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ತಲುಪಬೇಕಿತ್ತು. ಬುಧವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬಸ್ಸಿನ ನಿರ್ವಾಹಕ, ಹೊಸನಗರದ ಅಣ್ಣಪ್ಪ (38) ಹಾಗೂ ಪ್ರಯಾಣಿಕ, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಹರ್ಷಿತ್ (25) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಣ್ಣಪ್ಪ ಈಚೆಗಷ್ಟೇ ಕೆಲಸಕ್ಕೆ ಸೇರಿದ್ದರು ಎಂದು ತಿಳಿದುಬಂದಿದೆ.




