March 13, 2026

ಮೂಡಿಗೆರೆ: ಪ್ರಮೋದ್‌ ಮುತಾಲಿಕ್ ವೇದಿಕೆಯಲ್ಲಿದ್ದ ಕಾರ್ಯಕ್ರಮದಲ್ಲಿ ಭಾಗವಸಿದ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ

0
image_editor_output_image1652737985-1753849135528.jpg

ಮೂಡಿಗೆರೆ: ಮಂಗಳವಾರ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಸಾರ್ವಜನಿಕ ಶ್ರೀ ಹಿಂದೂ ಮಹಾಸಭಾ ಗಣಪತಿ ಸೇವಾ ಸಮಿತಿ ವತಿಯಿಂದ ನಡೆದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಪ್ರಮೋದ್‌ ಮುತಾಲಿಕ್ ಜೊತೆ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ವೇದಿಕೆ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಕೇಸರಿ ಶಾಲು ಹಾಕಿಕೊಂಡಿರುವುದು ಗಣಪತಿಗಾಗಿ, ನನ್ನ ಧರ್ಮಕ್ಕಾಗಿ. ನನ್ನ ಜೊತೆ ನನ್ನ ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಹಿಂದೂವಾಗಿ, ದಲಿತೆಯಾಗಿ, ಮಹಿಳೆಯಾಗಿ ನನ್ನನ್ನು ದೇವರು ಇಲ್ಲಿ ಹುಟ್ಟಿಸಿದ್ದಾನೆ. ನಾನು ಆ ಅಸ್ತಿತ್ವದಲ್ಲಿ ಇಲ್ಲಿಗೆ ಬಂದಿದ್ದೇನೆ. ಶಾಸಕಿಯಾಗಿ ಪಕ್ಷವನ್ನು ಪ್ರತಿನಿಧಿಸುವುದು ಆಮೇಲೆ. ಈಗ ನಾನು ಗಣಪತಿ ಸಮಿತಿ ಕಾರ್ಯಾಧ್ಯಕ್ಷೆಯಾಗಿ ಇಲ್ಲಿ ಬಂದಿದ್ದೇನೆ. ನಾನು ಕಾಂಗ್ರೆಸ್ ನಲ್ಲೇ ಇರುತ್ತೇನೋ, ಬಿಜೆಪಿ, ಬಿಎಸ್ಪಿ, ಎಸ್ಟಿಪಿಐ ಸೇರುತ್ತೇನೋ ಎಂಬುದನ್ನು 3 ವರ್ಷಗಳ ಬಳಿಕ ನೋಡೋಣ ಎಂದು ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *

error: Content is protected !!