September 22, 2026

ಮಂಗಳೂರು: ಔಷಧ ಎಂದು ಇಲಿಪಾಷಾಣ ಸೇವಿಸಿ ಹೆಡ್ ಕಾನ್‌ಸ್ಟೆಬಲ್ ಮಂಜುನಾಥ ಹೆಗ್ಡೆ ಸಾವು

0
image_editor_output_image-210995470-1753854748079.jpg

ಮಂಗಳೂರು: ಔಷಧಿಯೆಂದು ತಪ್ಪಾಗಿ ಗ್ರಹಿಸಿ ಇಲಿಪಾಷಣ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್‌ ಠಾಣೆಯ ಕಾನ್ ಸ್ಟೇಬಲ್‌ ಬಾಕ್ರಬೈಲ್‌ ಮಂಜುನಾಥ್‌ ಹೆಗ್ಡೆ (44) ಚಿಕಿತ್ಸೆ ಫಲಕಾರಿಯಾಗದೆ ರವಿವಾರ ರಾತ್ರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಅನಾರೋಗ್ಯ ಸಮಸ್ಯೆಗೆ ಸಂಬಂಧಿಸಿ ಆಯುರ್ವೇದ ಔಷಧ ಸೇವಿಸುತ್ತಿದ್ದ ಅವರು, ಔಷಧ ಎಂದುಕೊಂಡು ಇಲಿ ವಿಷ ಸೇವಿಸಿದ್ದರು.

 

ಚಿಂತಾಜನಕ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹರೇಕಳ ಮೂಲದವರಾದ ಅವರು ಸುರತ್ಕಲ್ ಚೇಲೈರು ಬಳಿ ವಾಸವಾಗಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!