September 22, 2026

ಪಿಡಬ್ಲ್ಯೂಡಿ ಸಹಾಯಕ ಇಂಜಿನಿಯರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0
image_editor_output_image-695606498-1753939484895.jpg

ನವದೆಹಲಿ: ಅಸ್ಸಾಂನಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಸಹಾಯಕ ಎಂಜಿನಿಯರ್ ಆಗಿದ್ದ ಯುವತಿ ಇಂದು ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಆ ಸ್ಥಳದಿಂದ ಪೊಲೀಸರು ವಶಪಡಿಸಿಕೊಂಡ ಸೂಸೈಡ್ ನೋಟ್ನಲ್ಲಿ ಇಬ್ಬರು ಹಿರಿಯ ಅಧಿಕಾರಿಗಳು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ. 30 ವರ್ಷದ ಜೋತಿಷಾ ದಾಸ್ ಬೊಂಗೈಗಾಂವ್‌ನಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸುಮಾರು 1 ವರ್ಷದಿಂದ ಕೆಲಸ ಮಾಡಿದ್ದರು.

 

ಅವರು ತಮ್ಮ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆಯ ಕೈಬರಹದ ಸೂಸೈಡ್ ನೋಟ್ ಅನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಆತ್ಮಹತ್ಯೆಯಿಂದ ಸಾವನ್ನಪ್ಪಿದ ಎಂಜಿನಿಯರ್ ಜ್ಯೋತಿಷಾ ದಾಸ್, ನಕಲಿ ಬಿಲ್‌ಗಳನ್ನು ತೆರವುಗೊಳಿಸಲು ಸಹೋದ್ಯೋಗಿಗಳ ಒತ್ತಡ ಹೆಚ್ಚಾಗಿದ್ದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!