March 18, 2026

ಅಡ್ಯನಡ್ಕ: ಜನತಾ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಡಿ. ಶ್ರೀನಿವಾಸ್ ಹಾಗೂ ದೈಹಿಕ ಶಿಕ್ಷಕ ಪಿ. ಉದಯಕೃಷ್ಣ ಭಟ್ ವಯೋನಿವೃತ್ತಿ: ನೂತನ ಪ್ರಾಂಶುಪಾಲರಾಗಿ ರವಿ ಕುಮಾರ್ ಅಧಿಕಾರ ಸ್ವೀಕಾರ

0
IMG-20250801-WA0018

ಅಡ್ಯನಡ್ಕ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಪ್ರಾಂಶುಪಾಲ ಡಿ. ಶ್ರೀನಿವಾಸ್ ಹಾಗೂ ಜನತಾ ಪ್ರೌಢಶಾಲೆಯಲ್ಲಿ ವಯೋನಿವೃತ್ತಿ ಹೊಂದಿದ ದೈಹಿಕ ಶಿಕ್ಷಣ ಶಿಕ್ಷಕ ಪಿ. ಉದಯಕೃಷ್ಣ ಭಟ್ ಅವರಿಗೆ ಜುಲೈ 31ರಂದು ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ಅಧ್ಯಕ್ಷ ಗೋವಿಂದ ಪ್ರಕಾಶ್ ಸಾಯ ಅವರು ಸನ್ಮಾನಿಸಿ ಮಾತನಾಡಿದರು.

ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು, ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು ಉಪಸ್ಥಿತರಿದ್ದರು. ನಿಯೋಜಿತ ಪ್ರಾಂಶುಪಾಲ ರವಿಕುಮಾರ್ ಆರ್.ಎಸ್. ಪ್ರಸ್ತಾವನೆಗೈದರು. ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್, ಹಿರಿಯ ಶಿಕ್ಷಕ ಎಸ್. ರಾಜಗೋಪಾಲ ಜೋಶಿ, ಉಪನ್ಯಾಸಕರಾದ ವಸಂತ ಗೌಡ, ಜಯಶ್ರೀ ಕೆ. ಆರ್., ಅನಿತಾ, ದ್ವಿತೀಯ ದರ್ಜೆ ಸಹಾಯಕರಾದ ಯಶಸ್ವಿನಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಮುಳಿಯಾಲ, ಕಾರ್ಯದರ್ಶಿ ಎಂ. ಕುಂಞ ನಾಯ್ಕ, ಕೇಪು ಗ್ರಾ.ಪಂ. ಸದಸ್ಯ ಮತ್ತು ಆಡಳಿತ ಮಂಡಳಿ ಸದಸ್ಯ ಅಬ್ದುಲ್ ಕರೀಮ್ ಕುದ್ದುಪದವು ಮಾತನಾಡಿದರು.

ವಿದ್ಯಾರ್ಥಿಗಳು ಮತ್ತು ಹಿರಿಯ ವಿದ್ಯಾರ್ಥಿಗಳು ಅನಿಸಿಕೆ ಹಂಚಿಕೊಂಡು ಉಡುಗೊರೆಗಳನ್ನು ಸಮರ್ಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ಹಾಗೂ ಕನ್ನಡ ಅಧ್ಯಾಪಕ ಶಿವಕುಮಾರ್ ಸಾಯ ಸನ್ಮಾನ ಪತ್ರ ವಾಚಿಸಿದರು.

ಆಂಗ್ಲ ಉಪನ್ಯಾಸಕಿ ಜಯಶ್ರೀ ಕೆ.ಆರ್. ಹಾಗೂ ಗಣಿತ ಶಿಕ್ಷಕಿ ಗೀತಾಕುಮಾರಿ ಡಿ. ಅವರು ಸ್ಫೂರ್ತಿಗೀತೆ ಹಾಡಿದರು. ಜನತಾ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಶೀನಪ್ಪ ನಾಯ್ಕ್ ಕೆ. ಕಾರ್ಯಕ್ರಮ ನಿರೂಪಿಸಿ, ಸಮಾಜಶಾಸ್ತ್ರ ಉಪನ್ಯಾಸಕ ಸದಾನಂದ ರೈ ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಜೀವಶಾಸ್ತ್ರ ಉಪನ್ಯಾಸಕ ರವಿಕುಮಾರ್ ಆರ್.ಎಸ್. ಅವರು ನೂತನ ಪ್ರಾಂಶುಪಾಲರಾಗಿ ಕರ್ತವ್ಯ ಸ್ವೀಕರಿಸಿದರು. ಆಡಳಿತ ಮಂಡಳಿ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!