ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಅಪಘಾತ: ಮಗು ಸಹಿತ ಮೂವರು ಗಂಭೀರ
ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ.
ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ ನಿತಿಲ್ (25), ಅವಿನಾಶ್(23), ಮಗು ಮೃತ್ವಿನ್ (2) ಎಂದು ಗುರುತಿಸಲಾಗಿದೆ.
ಇನ್ನೊಂದು ಕಾರಿನಲ್ಲಿದ್ದ ಮುಲ್ಕಿ ಮೂಲದ ಮೂವರು ಯುವಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.





