December 19, 2025

ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಹೃದಯಾಘಾತ: ಶಾಲಾ ಬಸ್ ಚಾಲಕ ಮೃತ್ಯು

0
image_editor_output_image-1844531219-1754037512442.jpg

ಮಣಿಪಾಲ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ ವಾಹನದ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಕಾರ್ಕಳ ನೀರೆ ಬೈಲೂರಿನ ಮೊಯ್ದಿನ್ ಬಾವ (65) ಮೃತಪಟ್ಟವರು.

ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ವಾಹನ ನಿಲ್ಲಿಸಿದ ಚಾಲಕ ಅದೇ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಮಾಜಸೇವಕ ನಿತ್ಯಾನಂದ ಒಳಕಾಡುವರನ್ನು ಕಂಡು ಎದೆನೋವಿನ ವಿಚಾರವನ್ನು ತಿಳಿಸಿದ್ದಾರೆ.

ತಕ್ಷಣ ಅವರನ್ನು ಅಂಬುಲೆನ್ಸ್ ನಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಆದರೆ ಅವರು ಮಾರ್ಗಮಧ್ಯೆದಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!