March 18, 2026

ಟ್ಯೂಷನ್‌ಗೆ ತೆರಳಿದ್ದ ಬಾಲಕನನ್ನು ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು

0
image_editor_output_image599496081-1754040119790.jpg

ಬೆಂಗಳೂರು: ಟ್ಯೂಷನ್‌ಗೆ ಹೋಗ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ ಬಳಿ ನಡೆದಿದೆ.

13 ವರ್ಷದ ನಿಶ್ಚಿತ್ ಹತ್ಯೆಯಾದ ಬಾಲಕ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಅರಕೆರೆ ಶಾಂತಿನಿಕೇತನ ಬಡಾವಣೆ ಬಳಿ ಟ್ಯೂಷನ್‌ನಿಂದ ಬರುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು.

ಬಾಲಕನ ತಂದೆ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದರಿಂದ ಕಿಡ್ನ್ಯಾಪರ್ಸ್ ಕರೆ ಮಾಡಿ 5 ಲಕ್ಷ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಕಿಡ್ನ್ಯಾಪರ್ಸ್ ಕಡೆಯಿಂದ ಫೋನ್ ಬರ್ತಿದ್ದಂತೆ ಬಾಲಕ ಪೋಷಕರು ಹುಳಿಮಾವು ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿಡ್ನ್ಯಾಪರ್ಸ್‌ಗಾಗಿ ಹುಡುಕಾಟ ಆರಂಭಿಸಿದ್ದರು. ಪೊಲೀಸರು ಲೊಕೇಶನ್ ಟ್ರೇಸ್ ಮಾಡಿ ಕಿಡ್ನ್ಯಾಪರ್ಸ್‌ಗಾಗಿ ಹುಡುಕಾಟ ನಡೆಸಿದ್ದರು. ಮತ್ತೊಂದೆಡೆ 5 ಲಕ್ಷ ರೂ. ಹಣವನ್ನು ಕೈಯಲ್ಲಿಡಿದು ಪೋಷಕರು ಕಾದು ಕುಳಿತ್ತಿದ್ದರು.

ಆದರೆ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬಾಲಕನ ಮೃತದೇಹ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಹುಳಿಮಾವು ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!