ಕಾರವಾರ: ಮೀನುಗಾರಿಕಾ ಬೋಟ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬೈತಕೋಲ್ ಮೀನುಗಾರಿಕೆ ಬಂದರಿನಲ್ಲಿ ನಡೆದಿದೆ.
ಲಕ್ಷ್ಮೀ ಎಂಬ ಹೆಸರಿನ ಬೋಟ್ ಮೀನುಗಾರಿಕೆಗೆ ಹೋಗಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಬೋಟ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮೀನುಗಾರರು ಕೂಡಲೇ ಸಿಲಿಂಡರ್ ಅನ್ನು ಸಮುದ್ರಕ್ಕೆ ಎಸೆದಿದ್ದಾರೆ.